ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಬಂಟ್ಚಾಳ ಉಪವಲಯ‌ ಅರಣ್ಯಾಧಿಕಾರಿವಿಕಾಸ್ ಶೆಟ್ಟಿ  ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ, ಆಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. 

ಅರಣ್ಯ ಪಾಲಕರಾದಸ್ಮಿತಾ, ಮುಖ್ಯ ಶಿಕ್ಷಕ  ಹರಿಪ್ರಸಾದ್‌ರವರು ಮಾತನಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಪ್ರಕೃತಿ ಗೀತೆ, ಪರಿಸರ ಸಂಬಂಧಿ ನೃತ್ಯ ಕಾರ್ಯಕ್ರಮಗಳು ನಡೆಯಿತು. ವಿದ್ಯಾರ್ಥಿ ಸಂಘದ ಸದಸ್ಯರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು. ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ  ವೀಣಾ ದೇವಾಡಿಗ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ  ಶ್ರವಣ್ ಸ್ವಾಗತಿಸಿದರು,  ಹನ್ಸಿಕಾ ಎಸ್  ವಂದಿಸಿದರು ,  ಕು. ಆಶ್ನಿ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

By Suddi9

Leave a Reply

Your email address will not be published. Required fields are marked *