ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ. ಕಿ. ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಭರಿತ ಆಹಾರವನ್ನು ನೀಡುವ ಸಲುವಾಗಿ 2025-26 ನೇ ಸಾಲಿನ “ಅಕ್ಷಯ ಪಾತ್ರೆ” ಕಾರ್ಯಕ್ರಮವನ್ನು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ. ಡಿ. ಪೂಜಾರಿ ಅವರು ಕಳಸೆಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು, ಮಕ್ಕಳ ಪೋಷಕರು, ಶಾಲಾ ವಿದ್ಯಾರ್ಥಿಗಳು, ಅಕ್ಷಯ ಪಾತ್ರೆಗೆ ಬಿಸಿಯೂಟಕ್ಕೆ ಬೇಕಾದ ತರಕಾರಿ ಇನ್ನಿತರ ಸಾಮಾಗ್ರಿಗಳನ್ನು ತುಂಬಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ಶಕೀಲಾ ಕೃಷ್ಣ ಮಿತ್ತ ಕೋಡಿ, ಧನಂಜಯ ಗೌಡ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಹರೀಶ್ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಗಳು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.
