ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ” ಉಚಿತ ನೇತ್ರ ತಪಾಸಣಾ ಶಿಬಿರ” ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀರಾಮ ವಿದ್ಯಾಕೇಂದ್ರ ದೇಶ ಕಟ್ಟುವ ಕಾಯಕವನ್ನು ಮಾಡುತ್ತಿದ್ದು, ಈ ಶಿಕ್ಷಣ ಸಂಸ್ಥೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆಗೆ ಉಚಿತ ಪರಿಹಾರವನ್ನು ನೀಡುವುದಾಗಿ ಹೇಳಿದರು .

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು,ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು.
ವೇದಿಕೆಯಲ್ಲಿ ಪ್ರಸಾದ್ ನೇತ್ರಾಲಯ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಡಾ.ಗೌರಿ ಶ್ಯಾಮ ಸುದರ್ಶನ್, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ,ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ಶ್ರೀ ಕೃಷ್ಣ ಪ್ರಸಾದ್ ಕಾಯರ್‌ಕಟ್ಟೆ , ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ವಸಂತ ಬಲ್ಲಾಳ್,ಉಪ ಪ್ರಾಂಶುಪಾಲರಾದ ದಿನೇಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಕು. ಶ್ವೇತಾ ಕಾರ್ಯಕ್ರಮವನ್ನು ನಿರ್ವಹಿಸಿದರು.
