ಬೆಂಗಳೂರು : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್ ತಂತ್ರಿ ಯವರಿಗೆ ಕರ್ನಾಟಕ ಸರಕಾರದ ಮುಜರಾಯಿ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಹಾಗು ಆಯುಕ್ತ ಡಾ.ವೆಂಕಟೇಶ ಎಂ.ವಿ (ಐಎಎಸ್), ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಆಗಮ ಶಾಸ್ತ್ರ ಪ್ರಮಾಣ ಪತ್ರ, ಪದಕ ಹಾಗು ನಗದು ಬಹುಮಾನ ನೀಡಿ ಗೌರವಿಸಲಾಯಿತು. ಇವರು ಪೊಳಲಿ ಸದಾಶಿವ ತಂತ್ರಿಗಳ ಪುತ್ರ ಪೊಳಲಿ ಗಿರಿ ಪ್ರಕಾಶ್ ತಂತ್ರಿಗಳಿಗಳು ಪುರೋಹಿತರು ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರು, ವಿವಿಧ ಬ್ರಾಹ್ಮಣ ಸಂಘಟನೆಗಳ ಪದಾಧಿಕಾರಿಗಳೂ ಸೇವೆ ಸಲ್ಲಿಸಿದ್ದಾರೆ.
