ಬಂಟ್ವಾಳ : ಇತ್ತೀಚೆಗೆ ನಿಧನರಾದ ದಲಿತ ಮುಖಂಡ, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರು ಅವರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಕಾರ್ಯಕ್ರಮ ಬಿ.ಸಿ ರೋಡಿನ ತಾಲೂಕು ಅಂಬೇಡ್ಕರ್ ಭವನದಲ್ಲಿ  ನಡೆಯಿತು.


ಮಾಜಿ ಸಚಿವ ಬಿ.ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ಪಿಯೂಸ್ ಎಲ್.ರೋಡ್ರಿಗಸ್, ಜಿ. ಪಂ. ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರು ನಿಧನರಾದ ಜನಾರ್ದನ ಚಂಡ್ತಿಮಾರ್ ಅವರ ಗುಣಗಾನಗೈದರು.


ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ,ಬೂಡಾ ಅದ್ಯಕ್ಷ ಬೇಬಿ ಕುಂದರ್ಜಿ.ಪಂ.ಮಾಜಿ ಸದಸ್ಯ ಪದ್ಮಶೇಖರ ಜೈನ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಪುರಸಭಾ ಸದಸ್ಯರಾದ  ರಾಮಕೃಷ್ಣ ಆಳ್ವ,ಮಾಜಿ ಸದಸ್ಯ ಸದಾಶಿವ ಬಂಗೇರ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಮಾಜಿ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಜಿಲ್ಲ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಪ್ರಮುಖರಾದ ಪದ್ಮರಾಜ್ ಆರ್.ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ನ್ಯಾಯವಾದಿ ಶೈಲಜಾ, ಕೆ.ಪದ್ಮನಾಭ ರೈ ನುಡಿನಮನ ಸಲ್ಲಿಸಿದರು.


ಪಕ್ಷದ ಪ್ರಮುಖರಾದ ಮಹಮ್ಮದ್ ನಂದಾವರ, ನ್ಯಾಯವಾದಿ ಸುರೇಶ್ ಕುಮಾರ್ ನಾವೂರು, ಮೊದಲಾದವರು ಭಾಗವಹಿಸಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಸ್ವಾಗತಿಸಿ, ರಾಜೀವ ಕಕ್ಕೆಪದವು ನಿರೂಪಿಸಿದರು.

By suddi9

Leave a Reply

Your email address will not be published. Required fields are marked *