ಬಂಟ್ವಾಳ  : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಇದರ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ” ನಮ್ಮೂರ ಹೆಮ್ಮೆ” ಕಾರ್ಯಕ್ರಮವು ಬಿ.ಸಿ ರೋಡಿನಲ್ಲಿರುವ ತಾಲೂಕು ಅಂಬೆಡ್ಕರ್ ಭವನದಲ್ಲಿ ಭಾನುವಾರ ಸಂಜೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದೇಶದ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡು ದೇಶದಲ್ಲಿರುವ ಸರ್ವ ಧರ್ಮ, ಜಾತಿ, ಜನಾಂಗದವರ ಜೊತೆ ಪ್ರೀತಿ ವಿಶ್ವಾಸ ಅನ್ಯೋನ್ಯತೆಯಿಂದ ಜೀವಿಸಲು ಎನ್.ಎಸ್.ಯು.ಐ ಪ್ರೇರಣೆಯಾಗಿದೆ, ಎನ್.ಎಸ್.ಯು.ಐ ಯಲ್ಲಿ ತೊಡಗಿಸಿಕೊಂಡ ಅನೇಕ ಮಂದಿ ಇಂದು ರಾಜಕೀಯ ಸಾಮಾಜಿಕ ರಂಗದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದರು.


   ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್, ಸದಸ್ಯರಾದ ಪಿಯೂಸ್ ಎಲ್.ರೋಡ್ರಿಗಸ್,   ಚಂದ್ರಪ್ರಕಾಶ್ ಶೆಟ್ಟಿ ತುಂಬೆ,   ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ,  ನೋಟರಿ, ನ್ಯಾಯವಾದಿ ಅಶ್ವಿನಿ ಕುಮಾರ್ ರೈ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ , ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುರಯ್ಯಾ ಅಂಜುಮ್, ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಮಾತನಾಡಿ ಶುಭ ಹಾರೈಸಿದರು.


ಪಕ್ಷದ ಪ್ರಮುಖರಾದ ಪದ್ಮಶೇಖರ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬಿ.ಎಂ.ಅಬ್ಬಾಸ್ ಅಲಿ, ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ವಿನಯಕುಮಾರ್ ಸಿಂಧ್ಯಾ, ಫಾರೂಕ್ ಪೆರ್ನೆ, ಸುಖ್ವೀಂದರ್ ಸಿಂಗ್ , ಶಾನ್ ಸಿರಿ, ಕೆ.ಪದ್ಮನಾಭ ರೈ, ಸುಧಾಕರ ಶೆಣೈ ಖಂಡಿಗ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಂತಿ ವಿ.ಪೂಜಾರಿ, ಶೈಲಜಾ ರಾಜೇಶ್, ಲವೀನಾ ವಿಲ್ಮಾ ಮೊರಾಸ್, ಉದ್ಯಮಿ ಸಲಾಂ ಸಮ್ಮಿ, ಪ್ರಜ್ವಲ್ ಶೆಟ್ಟಿ, ಮುಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ,ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

ಎನ್.ಎಸ್.ಯು.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮುಹಮ್ಮದ್ ಸಫ್ವಾನ್ ಸ್ವಾಗತಿಸಿ, ಉಪಾಧ್ಯಕ್ಷ ಶ್ರೀವತ್ಸ ಕಲ್ಲಡ್ಕ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು

By suddi9

Leave a Reply

Your email address will not be published. Required fields are marked *