ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು ಹಾಗು ಸ್ವ- ಸಹಾಯ ಸಂಘದ ಸದಸ್ಯರಿಗೆ ಸ್ವ-ನಿಧಿ ಸೆ ಸಮೃದ್ಧಿಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆಗಳ ಹಾಗೂ ಮಾದಕ ವ್ಯಸನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ವಾಸು ಪೂಜಾರಿ ಲೊರೆಟ್ಟೊ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಸರಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಆರ್ಹರಿಗೆ ತಲುಪಿಸುವಲ್ಲಿ ಪುರಸಭೆಯು ಪ್ರಯತ್ನಿಸುತ್ತಿದೆ. ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಲ್ಲಿ ಪುರಸಭೆಯು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಯಾದ ಮತ್ತಡಿ ಅವರು ಮಾತನಾಡಿ, ಬೀದಿಬದಿ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದರು.
ಜಿಲ್ಲಾ ನಗರ ಅಭಿಯಾನ ವ್ಯವಸ್ಥಾಪಕಿಯಾದ ಐರಿನ್ ರೆಬೆಲ್ಲೋ ಮಾತನಾಡಿ ಬೀದಿ ಬದಿ ವ್ಯಾಪಾರಿಗಳು ಪಿ.ಯಂ.ಸ್ವ ನಿಧಿ ಯೋಜನೆಯ ಪ್ರಯೋಜನ ಪಡೆದು ಸ್ವಯಂ ಉದ್ಯೋಗಿಗಳಾಗಬೇಕು ಹಾಗು ಸ್ವ ಸಹಾಯ ಸಂಘದ ಸದಸ್ಯರು ಬ್ಯಾಂಕ್ ಲಿಂಕೇಜ್ ಮೂಲಕ ಸಾಲ ಪಡೆದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ಮನೋ ವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ದಿವ್ಯ,ಎನ್ ಅವರು ಮಾದಕ ವ್ಯಸನದ ದುಶ್ಚಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶ್ ಎಡ್ವಿನ್ ಸಾಮಾಜಿಕ ಭಧ್ರತಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಎಸ್.ಬಿ.ಐ ಬ್ಯಾಂಕ್ ಸಿಬ್ಬಂದಿ ಜೀವನ್ ,ಪುರಸಭಾ ಸದಸ್ಯರಾದ ಪುರುಷೋತ್ತಮ ,ಮೀನಾಕ್ಷಿ ,ನಾಮ ನಿರ್ದೇಶಿತ ಸದಸ್ಯ ಜಗದೀಶ್ ಕುಂದರ್ ,ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ರೋಹಿತಾಶ್ವ ,ಪಟ್ಟಣ ಮಾರಾಟ ಸಮಿತಿಯ ಸದಸ್ಯರಾದ ಇಕ್ಬಾಲ್, ಸಮುದಾಯ ಸಂಘಟಕರಾದ ಉಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಿ ಆರ್.ಪಿ.ಗೀತಾ ಸ್ವಾಗತಿಸಿ, ಸಂಧ್ಯಾ ವಂದಿಸಿದರು.ಸಿ.ಆರ್ .ಪಿ . ಮಂಗಳ ಕಾರ್ಯಕ್ರಮ ನಿರೂಪಿಸಿದರು.
