ಬಂಟ್ವಾಳ: ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜ ಅರಸು ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಹೇಳಿದರು.


ಬಂಟ್ಚಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಬಂಟ್ವಾಳ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಾಮಾಜಿಕ ಅಭಿವೃದ್ಧಿ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.


ದೇವರಾಜ ಅರಸು ಅವರ ದೆಸೆಯಿಂದಾಗಿ ಇಂದು ಹಿಂದುಳಿದ ವರ್ಗದವರು ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದರು.ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಷಗಿರಿ ನಾಯ್ಕ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಪ್ರಭಾರ ಬಿಇಓ ನೋಣಯ್ಯ, ಜಾನುವಾರು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ  ಉಪಸ್ಥಿತರಿದ್ದರು.


ಈ ವೇಳೆ ಹಾಸ್ಟೆಲ್ ನ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ನಿಯಮಪಾಲಕ ಆನಂದ, ಪುಷ್ಪಲತಾ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. 

By suddi9

Leave a Reply

Your email address will not be published. Required fields are marked *