ಬಂಟ್ವಾಳ:  ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೂಲಕ ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆನಿಲ್ಲಲಿ ಈ ನಿಟ್ಟಿನಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗಬೇಕು ಎಂದುಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ನುಡಿದರು.


ಬಂಟ್ವಾಳ ಸಮೀಪದ ಜಕ್ರಿಬೆಟ್ಟುವಿನಲ್ಲಿ ಆಚರಿಸಲ್ಪಡುವ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ,ಸ್ವಾತಂತ್ರ್ಯ ಚಳುವಳಿಯಲ್ಲಿ ದಾಸ್ಯ ಸಂಕೋಲೆಯಿಂದ ಮುಕ್ತಗೊಳಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಜನರನ್ನು ಜಾತಿ-ಧರ್ಮ, ವರ್ಗ ಬೇಧ ಮರೆತು  ಒಟ್ಟುಗೂಡಿಸಲು ಕಂಡುಕೊಂಡ ಮಾರ್ಗ ಸಾರ್ವಜನಿಕ ಗಣೇಶೋತ್ಸವವಾಗಿದೆ.

ತಿಲಕರ ಅದೇ ಸಾಮಾಜಿಕ ಸಾಮರಸ್ಯ ಸಾರುವ ಅದನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಇಂದು ಜಕ್ರಿಬೆಟ್ಟು ಗಣೇಶೋತ್ವವನ್ನು ಸಮಾಜದ ಎಲ್ಲ ವರ್ಗದ ಸೇರುವಿಕೆಯಿಂದ “ಬಂಟ್ವಾಳ ಹಬ್ಬ”ವಾಗಿ ಆಚರಿಸಲಾಗುತ್ತಿದೆ ಎಂದರು.ಮಂಗಳೂರಿನ ಖ್ಯಾತ ವೈದ್ಯ ಡಾ ಶಿವಪ್ರಸಾದ್ ರೈ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಉದ್ಯಮಿ ಉಮೇಶ್ ಸಾಲಿಯಾನ್ ಬೆಂಜನಪದವು ಮುಖ್ಯ ಅತಿಥಿಗಳಾಗಿದ್ದರು.

 
ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ, ಮಾಣಿ ಗ್ರಾ ಪಂ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಸದಸ್ಯ ಸುರೇಶ್ ಪೂಜಾರಿ ಜೋರಾ, ಇರಾ ಗ್ರಾ ಪಂ ಸದಸ್ಯ ರಝಾಕ್ ಕುಕ್ಕಾಜೆ, ಮಂಚಿ ಗ್ರಾ ಪಂ ಅಧ್ಯಕ್ಷ ಇಬ್ರಾಹಿಂ ಜಿ ಎಂ, ಪ್ರಮುಖರಾದ ಶಬೀರ್ ಸಿದ್ದಕಟ್ಟೆ, ಸುಧಾಕರ ಶೆಣೈ ಖಂಡಿಗ, ವೆಂಕಪ್ಪ ಪೂಜಾರಿ, ಕರೀಂ ಬೊಳ್ಳಾಯಿ, ಡೆಂಝಿಲ್ ನೊರೊನ್ಹಾ ಮೊದಲಾದವರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು ಸ್ವಾಗತಿಸಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ ವಂದಿಸಿದರು. ರಾಜೀವ್ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *