ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ  ಇದರ ಆಶ್ರಯದಲ್ಲಿ ಜರುಗುವ 48 ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಮತ್ತು ಪ್ರತಿಷ್ಠಾನದ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮವು ಕಲ್ಲಡ್ಕ ಪ್ರತಿಷ್ಠಾನದ ಕಚೇರಿಯಲ್ಲಿ ಜರುಗಿತು.


ಸ್ಥಳೀಯ ಪ್ರಮುಖರಾದ ಮೋಹನದಾಸ ಕೊಟ್ಟಾರಿಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಒಂದು ಮಂಡಲವನ್ನು ಪೂರ್ತಿಗೊಳಿಸುವ ಈ ಬಾರಿಯ 48 ನೇ ವರ್ಷದ ಉತ್ಸವವು ಅಭೂತಪೂರ್ವ ಯಶಸ್ಸನ್ನು ಕಾಣಲಿ ಎಂದು ಶುಭಹಾರೈಸಿದರು.


ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಗರಾಜ ಆಚಾರ್ಯ ಅವರು ಪ್ರತಿಷ್ಠಾನದ ಲಾಂಛನವನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭ ಲಾಂಛನ ವಿನ್ಯಾಸಕಾರರಾದ ಅಜಿತ್ ಕುಮಾರ್ ಪ್ರತಾಪ್ ನಗರ ಇವರನ್ನು ಗೌರವಿಸಲಾಯಿತು.
ಪ್ರತಿಷ್ಠಾನದ ಅದ್ಯಕ್ಷರಾದ ಯತೀನ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ವಂದಿಸಿದರು, ಕೋಶಾದಿಕಾರಿ ರಾಜೇಶ್ ಕೊಟ್ಟಾರಿ ಕಾರ್ಯಕ್ಲಮ ನಿರೂಪಿಸಿದರು.
ಉತ್ಸವ ಸಮಿತಿಯ ಅದ್ಯಕ್ಷರಾದ ಯೋಗೀಶ್ ಪೂಜಾರಿ, ಕಾರ್ಯದರ್ಶಿ ಪ್ರಮೀತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *