ಗುರುಪುರ: ಬಿಲ್ಲವ ಸಮಾಜ ಸೇವಾ ಸಂಘ(ರಿ) ಹಾಗೂ ಸ್ಪೂರ್ತಿ ಬಿಲ್ಲವ ಮಹಿಳಾ ಘಟಕ ಗುರುಪುರ ಇವುಗಳ ಜಂಟಿ ಆಶ್ರಯದಲ್ಲಿ ಸೆ. ೭ರಂದು ಬಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ದಿನಾಚರಣೆ ಅಂಗವಾಗಿ ಗುರು ಜಯಂತಿ ಆಯೋಜಿಸಲಾಗಿದೆ.

ಬೆಳಿಗ್ಗೆ ೭ ಗಂಟೆಗೆ ಗಣಹೋಮ, ೯ರಿಂದ ಭಜನೆ, ೧೨ಕ್ಕೆ ಮಹಾಪೂಜೆ, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ೨ರಿಂದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ `ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ ನಡೆಯಲಿದೆ.
