ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆ, ಯಕ್ಷಗಾನ, ನಾಟಕ, ದೈವಕೋಲ, ನೇಮ ಇತ್ಯಾದಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗಿನ ತೊಂದರೆಗಳನ್ನು ನಿವಾರಿಸಿ, ಈ ಮೊದಲಿನಂತೆ ಕಾರ್ಯಕ್ರಮಗಳನ್ನು ನಡೆಸಲು ಅನುವು ಮಾಡಿಕೊಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಸಂಸ್ಕಾರ ಭಾರತಿಯ ನಿಯೋಗ ಸರಕಾರದ ಮುಖ್ಯಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿತು.

ಶುಕ್ರವಾರ ಸಂಜೆ ಸಂಸ್ಕಾರ ಭಾರತೀಯ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿಅವರ ನೇತೃತ್ವದ ನಿಯೋಗ
ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಅಧ್ಯಕ್ಷ ಟಿ.ತಾರಾನಾಥ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್ ಬ್ರಹ್ಮರಕೂಟ್ಟು, ಪ್ರಾಂತ ಉಪಾಧ್ಯಕ್ಷೆ ರೂಪಲೇಖ ಪುತ್ತೂರು, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸಂಕಪ್ಪ ಶೆಟ್ಟಿ ಸಂಚಯಗಿರಿ, ಪ್ರಮುಖರಾದ ಮನ್ಮಥ ಶೆಟ್ಟಿ ಪುತ್ತೂರು ಈ ಸಂದರ್ಭ ಜತೆಗಿದ್ದರು
