ಬಂಟ್ವಾಳ:ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿ ಪೂರ್ವ ಕಾಲೇಜ್ ನಲ್ಲಿ ಉಪನ್ಯಾಸಕರಾಗಿ ಸತತವಾಗಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಪದ್ದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಹೊಸನಗರಕ್ಕೆ ವರ್ಗಾವಣೆ ಗೊಂಡಿರುವ ಶ್ರೀನಿವಾಸ ನಾಯ್ಕ ಹಾಗೂ ಸಂಘದ ನಿವೃತ್ತಿಯಾಗಿರುವ ಸಿಬ್ಬಂದಿ ಯಶೋದರ ಶೆಟ್ಟಿಗಾರ್ ಅವರನ್ನು ಅಭಿನಂದಿಸಲಾಯಿತು.

ಸಂಘದ ವತಿಯಿಂದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರು ಇವರಿಬ್ಬರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ,ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ , ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿ ಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

