ಬಂಟ್ವಾಳ: ಇಲ್ಲಿನ ಪುರಸಭಾ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆಯನ್ನು ಆಚರಿಸಲಾಯಿತು.ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,
ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವ ಮೂಲಕ ಭಾರತ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ಕಾರಿ ನೌಕರರು ಕೈಜೋಡಿಸಬೇಕೆಂದರು

ಇದೇ ವೇಳೆ ಪುರಸಭಾ ವ್ಯಾಪ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್ ವಿಲೇವಾರಿ ವಾಹನ ಕಾರ್ಮಿಕರಿಗೆ ನಮಸ್ತೆ ಯೋಜನೆಯಡಿ ವೈಯಕ್ತಿಕ ಸುರಕ್ಷಾ ಪರಿಕರಗಳನ್ನು ವಿತರಿಸಲಾಯಿತು.
ಬಳಿಕ ಬಿ.ಮೂಡ ಗ್ರಾಮದ ಸಂಚಯಗಿರಿ ವಸತಿ ಬಡಾವಣೆಯಲ್ಲಿ ನಾಗರಿಕ ಕ್ರಿಯಾ ಸಮಿತಿ ಮತ್ತು ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಯಿತು.
ಈಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್,ವ್ಯವಸ್ಥಾಪಕ ರಜಾಕ್,ಸಮುದಾಯ ಸಂಘಟಕಿ ಉಮಾವತಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
