ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಏನ್ ಎಮ್ ಪಿ ಟಿ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಶಾಲಾ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಈ ಸಂದರ್ಭ ಗುತ್ತಿಗೆದಾರರಾದ ಸಂದೀಪ್ ಶೆಟ್ಟಿ ಅರೆಬೆಟ್ಟು ರವರಿಗೆ ಕಟ್ಟಡ ನಿರ್ಮಾಣ ಕಾಮಗಾರಿಯ ಜವಾಬ್ದಾರಿ ಹಸ್ತಾಂತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ, ಸದಸ್ಯರುಗಳಾದ ಸುಧಾಕರ, ಗೋಪಾಲಕೃಷ್ಣ ಭಟ್, ವಿಶ್ವನಾಥ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡ್, ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
