ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಬಂಟ್ವಾಳ ;ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮನೋಹರ್ ಎಸ್.ದೊಡ್ಡಮನಿ ಅವರು ಕನ್ನಡನಾಡು, ನುಡಿ ಮತ್ತು ಸಾಹಿತ್ಯದ ಕಾಲಘಟ್ಟಗಳಲ್ಲಿ ಹೆಸರಾಂತ ಕವಿಗಳ ಕೊಡುಗೆ ಕುರಿತು ಮಾಹಿತಿ ನೀಡಿದರಲ್ಲದೆ ವಿದ್ಯಾರ್ಥಿಗಳಿಗೆ ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ರಾಜ್ಯೋತ್ಸವದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ, ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಉಪಸ್ಥಿತರಿದ್ದರು.
. ಪಿ.ಬಿ ತೃಪ್ತಿ ಸ್ವಾಗತಿಸಿದರು.ತನ್ವಿಶ್ರೀ ವಂದಿಸಿದರು. ದಿಯಾ.ಡಿ ಮತ್ತು ಸಾನ್ವಿತ್ ವಿ ಕುಮಾರ್ ಕಾರ್ಯಕ್ರಮ ನಿರೂಪಿಸಿದರು
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು,



