ಶರೀಫ್ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಗೆ ಆಯ್ಕೆ
ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ವಿತರಿಸುವ ಮೆಲ್ಕಾರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರು ರಾಜ್ಯಮಟ್ಟದ “ಕರ್ನಾಟಕ ರತ್ನ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ನ.9 ರಂದು ಮಹಮ್ಮದ್ ಶರೀಫ್ ಸಹಿತ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಇವರಿಗೆ
ಈಗಾಗಲೇ ಅವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿದೆ.



