ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ೨೦೨೫ _ ೨೬ ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಶಾಲಾ ಮೈದಾನದಲ್ಲಿ ನಡೆಯಿತು.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಶ್ರೀ ರಾಮ ವಿದ್ಯಾಕೇಂದ್ರದ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಪದವಿಯ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ವಿದ್ಯಾರ್ಥಿ ಜಯಸೂರ‍್ಯ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಉಪನ್ಯಾಸಕಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
