ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ವತಿಯಿಂದ ಪಂಚ ಗ್ಯಾರಂಟಿ ಕ್ಯಾಲೆಂಡರ್ 2026 ರ ಬಿಡುಗಡೆ ಸಮಾರಂಭವು ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಿತು.

ಮಾಜಿ ಸಚಿವರಾದ  ಬಿ.ರಮಾನಾಥ ರೈ ರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ  ಮಾತನಾಡಿ,ರಾಜ್ಯ ಸರಕಾರದ ಪಂಚಗ್ಯಾರಂಟಿ ರಾಜ್ಯಕ್ಕೆ ಮಾದರಿಯಾಗಿದೆ.ಇದನ್ನು ಅನುಷ್ಠಾನಕ್ಕೆ ತರುವ ಮೂಲಕ ಮುಖ್ಯಮಂತ್ರಿ‌ಸಿದ್ದರಾಮಯ್ಯ ಸರಕಾರ ನುಡಿದಂತೆ ನಡೆದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಜಯಂತಿ ವಿ‌.ಪೂಜಾರಿ ರವರು ವಹಿಸಿದ್ದರು
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣ ನಾಯ್ಕ್, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್,ಪುರಸಭಾ ಅಧ್ಯಕ್ಷರಾದ ವಾಸು ಪೂಜಾರಿ ಲೊರೆಟ್ಟೊ,ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ,ಪ್ರಮುಖರಾದ ಚಂದ್ರಶೇಖರ್ ಭಂಡಾರಿ,ಬಾಲಕೃಷ್ಣ ಅಂಚನ್,ಸದಾಶಿವ ಬಂಗೇರ,ಪಂಚ ಗ್ಯಾರಂಟಿ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥರಿದ್ದರು.
ಸಮಿತಿಯ ಸದಸ್ಯ ಕಾರ್ಯದರ್ಶಿಯವರಾದ ಸಚಿನ್ ಕುಮಾರ್ ಸ್ವಾಗತಿಸಿದರು. 

By suddi9

Leave a Reply

Your email address will not be published. Required fields are marked *