ಬಂಟ್ವಾಳ: ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯಕ್ಷದ್ರುವ ಯಕ್ಷ ಶಿಕ್ಷಣ – ಯಕ್ಷಗಾನ ಅಭ್ಯಾಸ ತರಗತಿಯ ಸಮಾರೋಪ ಸಮಾರಂಭ ಶಾಲಾ ಸಭಾಂಗಣದಲ್ಲಿ ನಢಯಿತು.

ಪಟ್ಲ ಪೌಂಡೇಶನ್ ನ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಅವರು ಸಭಾಧ್ಯಕ್ಚತೆ ವಹಿಸಿ ಮಾತನಾಡಿ, “ಅವಕಾಶ ವಂಚಿತ ಸರಕಾರಿ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿರುವ ಯಕ್ಷದ್ರುವ ಯಕ್ಷ ಶಿಕ್ಷಣವು ಯಕ್ಷಗಾನದ ಅರಿವಿನ ಜೊತೆಗೆ ಸಂಸ್ಕಾರ ಭರಿತ ಜೀವನವನ್ನು ಕಟ್ಟಿಕೊಡುತ್ತದೆ. ಪುರಾಣದ ಜ್ಞಾನಗಳನ್ನು ಬೆಳೆಸುವುದರೊಂದಿಗೆ ತನ್ನ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ವೇದಿಕೆಯಲ್ಲಿ ಪ್ರತಿಭೆಯನ್ನು ತೋರ್ಪಡಿಸಿದ ಮಕ್ಕಳು ಭವಿಷ್ಯದಲ್ಲಿ ಸಮಾಜಕ್ಕೆ ಕೊಡುಗೆಗಳಾಗಿ ಮೂಡಿ ಬರಲಿದ್ದಾರೆ” ಎಂದರು
ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪೂವಪ್ಪ ಶೆಟ್ಟಿ ಅಳಿಕೆ ಮಾತನಾಡಿ, “ಯಕ್ಷಗಾನ ಕಲೆಯನ್ನು ವೃತ್ತಿಜೀವನಕ್ಕೆ ಆಧಾರವಾಗಿಟ್ಟುಕೊಂಡು ಬೆಳೆಯಬೇಕಾಗಿಲ್ಲ. ವೃತ್ತಿಯೊಟ್ಟಿಗೆ ಪ್ರವೃತ್ತಿಯಾಗಿ ಬೆಳೆಸಿಕೊಂಡು ತನ್ನ ಮೌಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಯಕ್ಷ ಶಿಕ್ಷಣದ ಯೋಜನೆಯಡಿ ಸಾವಿರಾರು ಮಕ್ಕಳು ಯಕ್ಷಗಾನದತ್ತ ಒಲವು ತೋರಿಸುತ್ತಿರುವುದು ಯಕ್ಷಗಾನ ರಂಗಕ್ಕೊಂದು ಒಳ್ಳೆಯ ಬೆಳವಣಿಗೆ ಎಂದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ, ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು, ಯಕ್ಷಗಾನ ಗುರುಗಳಾದ ಅಶ್ವತ್ಥ್ ಮಂಜನಾಡಿ, ಶಿಕ್ಷಕಿ ಶಾಂತ, ಶಿಕ್ಷಕರಾದ ಜಗನ್ನಾಥ ಪುರುಷ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ ಕಲಾವಿದ ತಾರಾನಾಥ್ ಕೈರಂಗಳ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ವಂದಿಸಿದರು.
