ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಭಾನುವಾರ ಬಂಟ್ವಾಳ  ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ‌ ನಡೆಯಿತು.
ತಾಲೂಕು ತಹಶೀಲ್ದಾರ್  ಮಂಜುನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನವಿಕಾಸ ಉತ್ತಮ ಸಾಧನೆ ಮಾಡುತ್ತಿದೆ. ಡಾ. ಹೇಮಾವತಿ ಹೆಗ್ಗಡೆಯವರ ಈ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿಯಾಗುತ್ತಿದೆ ಎಂದರು.
ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಮಾತನಾಡಿ, ಜ್ಞಾನವಿಕಾಸ ಮಹಿಳೆಯರ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಸ್ವ ಉದ್ಯೋಗದೊಂದಿಗೆ ಸ್ವಾವಲಂಬಿಯಾಗಿ ಮಾಡುವುದೇ ಇದರ ಗುರಿಯಾಗಿದೆ ಎಂದರು.
ರಾಜ್ಯ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್  ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಹರೀಂದ್ರ ಪೈ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು.
ಇದೇ ವೇಳೆ ಮಂಗಳೂರು ಇಂಚರಾ ಪೌಂಡೇಶನ್ ನ ಆಡಳಿತಾಧಿಕಾರಿ ಮಲ್ಲಿಕಾ ಬಂಗೇರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸದೃಡ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಆರೋಗ್ಯ ಎಂಬ ವಿಷಯದ ಬಗ್ಗೆ   ವಿಚಾರ ಮಂಡಿಸಿದರು. ಸಂದರ್ಭ ಪುಷ್ಪ ಗುಚ್ಚ , ರಂಗೋಲಿ ಸ್ಪರ್ಧೆಯು ನಡೆಯಿತು.
ಜ್ಞಾನವಿಕಾಸ ಸಂಯೋಜಕಿ ಸವಿತಾ, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಸದಾನಂದನ ನಾವೂರು, ಜನಜಾಗೃತಿ ಸದಸ್ಯ ಶೇಖರ ಸಾಮಾನಿ, ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು

By suddi9

Leave a Reply

Your email address will not be published. Required fields are marked *