ಬಂಟ್ವಾಳ :ಪ್ರಸ್ತುತ ಕಾಲ ಘಟ್ಟದಲ್ಲಿ ಹಿಂದೂ ಎನ್ನುವ ಅಭಿಮಾನ ನಮ್ಮಲ್ಲಿ ಕಡಿಮೆಯಾಗಿದೆ, ಹಿಂದೂ ಸಮಾಜವು ಹಿಂದುಳಿಯಲು ನಮ್ಮ ರಾಜಕೀಯ ವ್ಯವಸ್ಥೆಯೂ ಕೂಡ ಕಾರಣವಾಗಿದೆ, ರಾಜಕೀಯ ಶಕ್ತಿಗಳು ಸಮಾಜವನ್ನು ವಿಭಜಿಸಿ ತುಷ್ಟಿಕರಣ ಮಾಡುತ್ತಿದ್ದು, ಹಿಂದೂ ಸಮಾಜವನ್ನು ಜಾಗೃತಗೊಳಿಸಿ, ಬಲಿಷ್ಠಗೊಳಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಉದ್ಯಮಿ ಐತಪ್ಪ ಆಳ್ವ ಸುಜೀರುಗುತ್ತು ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕಬೇಲ ಶ್ರೀ ಅನ್ನಪೂರ್ಣೇಶ್ವರಿ ಮಿತ್ರ ಮಂಡಳಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ಇದರ 45ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪುದು ಗ್ರಾ ಪಂ ಸದಸ್ಯ ಪದ್ಮನಾಭ ಶೆಟ್ಟಿ ಮಾತನಾಡಿ, ಯುವಕರು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಟಗೊಳಿಸಬೇಕು ಎಂದರು.
ದ. ಕ.ಜಿಲ್ಲಾ ಬಿಜೆಪಿ ಫಲಾನುಭವಿ ಪ್ರಕೋಷ್ಠದ ಸಂಚಾಲಕಿ ಜಯಶ್ರೀ ಕರ್ಕೇರ ಮಾತನಾಡಿ, ಆಧುನಿಕ ಸಮಾಜದಲ್ಲಿ ಧಾರ್ಮಿಕ, ಸಾಮಾಜಿಕ ಪ್ರಜ್ಞೆ ಕಡಿಮೆಯಾಗಿ, ಜಾತಿ ಪದ್ಧತಿ, ಭ್ರಷ್ಟಾಚಾರ,ಮೇಲು,ಕೀಳು ಭಾವನೆ ಹೆಚ್ಚಾಗುತ್ತಿದೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತ ಸಂಭ್ರಮದ ಈ ಸಂದರ್ಭದಲ್ಲಿ ಪಂಚಪರಿವರ್ತನೆಗಳ ಮೂಲಕ ಯುವಕರು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಉದ್ಯಮಿ ರಾಮಕೃಷ್ಣ ಶೆಟ್ಟಿ ಕಬೇಲಗುತ್ತು,ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ಗಾಂಭೀರ, ಸಂಘದ ಅಧ್ಯಕ್ಷ ಉಮೇಶ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಶಾಲಿನಿ ಪುಷ್ಪರಾಜ್, ಗೌರವದ್ಯಕ್ಷ ಚಂದ್ರಹಾಸ ಪೂಜಾರಿ, ಸಲಹೆಗಾರ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಸಾಧಕ ವಿದ್ಯಾರ್ಥಿ ಉಜ್ವಲ್ ಹಾಗೂ ಸಂಘದ ಹಿರಿಯ ಸಲಹೆಗಾರಾದ ಚಂದ್ರಹಾಸ ಪೂಜಾರಿ, ಬಾಲಕೃಷ್ಣ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಉಜ್ವಲ್ ಕಬೇಲ ಸ್ವಾಗತಿಸಿದರು,ಯಸ್ಮಿತ್ ಬಹುಮಾನಿತರ ಪಟ್ಟಿ ವಾಚಿಸಿದರು, ಯಶೋದರ ಕಬೇಲ ವಂದಿಸಿದರು, ಕಿಶೋರ್ ಕುಮಾರ್ ಸುಜೀರು ಕಾರ್ಯಕ್ರಮ ನಿರೂಪಿಸಿದರು.ನಾಗಪ್ಪ ಪೂಜಾರಿ ಕಬೇಲ ಹಾಗೂ ಜೀವನ್ ಕಬೇಲ ಸಹಕರಿಸಿದರು
ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅಶ್ವತ್ಥಕಟ್ಟೆ ಪೂಜೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,
ಸಂಜೆ ಯಕ್ಷಗಾನ ಬಯಲಾಟ ನಡೆಯಿತು.
