ಬಂಟ್ವಾಳ :ಜಗತ್ತಿಗೆ ಶಾಂತಿಯ ಸಂದೇಶ ಕೊಟ್ಟ ದೇಶವಿದ್ದರೆ ಅದು ಭಾರತ,ಹಿಂದೂ ಪದ ಕೇವಲ ಧರ್ಮಕ್ಕೆ ಸೀಮಿತವಲ್ಲ ಭಾರತೀಯರೆಲ್ಲರೂ ಹಿಂದೂಗಳೇ ಅಗಿದ್ದಾರೆ, ನಮ್ಮ ದೇಶ, ಸಮಾಜದೊಟ್ಟಿಗೆ ನಾವು ಇರದಿದ್ದರೆ ಬದುಕು ಸಾರ್ಥಕವಾಗಲಾರದು, ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ,ಬೆಳೆಸಲು ಸಂಘಟನೆ ಅಗತ್ಯವಿದೆ ಎಂದು  ಉದ್ಯಮಿ ಸಂದೇಶ್ ಶೆಟ್ಟಿ ಅರೆಬೆಟ್ಟು ಹೇಳಿದ್ದಾರೆ.
ಶನಿವಾರ ರಾತ್ರಿ ನೆತ್ತರಕೆರೆ ಶಾಲಾ ವಠಾರದಲ್ಲಿ ನಡೆದಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ.) ಮತ್ತು ನೇತ್ರಾವತಿ ಮಾತೃ ಮಂಡಳಿ, ನೆತ್ತರಕೆರೆ ಇದರ 39ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಗೋಪಾಲಕೃಷ್ಣ ಶೆಟ್ಟಿ ಕೊಡ್ಮಾಣ್ ಮಾತನಾಡಿ, ಸಮಾಜ ಕಟ್ಟುವ ಕೆಲಸದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ಸಂಘಟನೆಗಳ ಮೇಲಿದೆ, ಸಂಘದ  ಸೇವಾ ಕಾರ್ಯಗಳು ಶ್ಲಾಘನೀಯವಾಗಿದೆ ಎಂದರು.

ಆಮ್ಟಾಡಿ ಪ್ರಾಥಮಿಕ  ಕೃಷಿ  ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ
ನೆತ್ತರಕೆರೆ ಶಾಲಾ ಮುಖ್ಯ ಶಿಕ್ಷಕಿ ಸೆಲ್ವಿಯಾ ಬ್ರಿಗ್ಸ್, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಗೋಪಾಲ್ ಕುಲಾಲ್ ಗೋವಿಂದೊಟ, ಸಂಘ ಅಧ್ಯಕ್ಷ ಜಗದೀಶ ಎನ್, ಗೌರವಾಧ್ಯಕ್ಷ ಪಿ ಸುಬ್ರಮಣ್ಯ ರಾವ್,ನೇತ್ರಾವತಿ ಮಾತೃ ಮಂಡಳಿಯ ಅಧ್ಯಕ್ಷೆ ಸುಶೀಲ ಶೇಖರ, ಸಂಚಾಲಕಿ ಲಲಿತಾ ಸುಂದರ ವೇದಿಕೆಯಲ್ಲಿದ್ದರು.
ಈ ಸಂದರ್ಭ ಮುಖ್ಯಮಂತ್ರಿಯಿಂದ ಚಿನ್ನದ ಪದಕ ಪಡೆದ ಮಂಗಳೂರು ಸಿಸಿಬಿ ಘಟಕದ ಸುಧೀರ್ ಕುಮಾರ್ ಜಾರಂದಗುಡ್ಡೆ ಇವರನ್ನು ಅಭಿನಂದಿಸಲಾಯಿತು.
ಅದೇರೀತಿ ಕೀರ್ತಿಶೇಷ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಸ್ಮರಣಾರ್ಥ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕದೊಂದಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಬಾಳಗೋಕುಲದ ಮಾತಾಜಿ ಗೌತಮಿ ಅವರನ್ನು ಸನ್ಮಾನಿಸಲಾಯಿತು.

ನವೋದಯ ಮಿತ್ರಕಲಾ ವೃಂದದ  ಉಪಾಧ್ಯಕ್ಷ ಸಂತೋಷ್ ಕುಲಾಲ್ ನೆತ್ತರಕೆರೆ ಸ್ವಾಗತಿಸಿ, ಕಾರ್ಯದರ್ಶಿ ಮಹೇಶ್ ವರದಿ ವಾಚಿಸಿದರು, ಸಂಚಾಲಕ ದಾಮೋದರ ನೆತ್ತರಕೆರೆ ಸನ್ಮಾನಿತರ ಕುರಿತು ಮಾತನಾಡಿದರು,ಕು ಸಿಂಚನ ಬಹುಮಾನಿತರ ಪಟ್ಟಿ ವಾಚಿಸಿ, ರಂಜಿತ್ ಹಾಗೂ ಕು ಸಿಂಧು ಸನ್ಮಾನಿತರ ಪಟ್ಟಿ ವಾಚಿಸಿದರು ನೇತ್ರಾವತಿ ಮಾತೃ ಮಂಡಳಿಯ ಕೋಶಾಧಿಕಾರಿ ಜಯಂತಿ ವಿಶ್ವನಾಥ ವಂದಿಸಿದರು. ಕು ವರ್ಷ ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆ 9ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮದ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ 7ರಿಂದ ಸಾಂಸ್ಕೃತಿಕ ನೃತ್ಯ ವೈವಿದ್ಯ, ಸಂಘದ ಕಲಾವಿದರ ಅಭಿನಯದ ತುಳು ನಾಟಕ ಪ್ರದರ್ಶನಗೊಂಡಿತು. 

By Suddi9

Leave a Reply

Your email address will not be published. Required fields are marked *