ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ  ಇಂದು ಎ.ಐ.ಸಿ.ಸಿ.ಟಿ.ಯು ವತಿಯಿಂದ  ಬಿ.ಸಿ.ರೋಡ್ ನಲ್ಲಿ  ಪ್ರತಿಭಟನೆ ನಡೆಯಿತು. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ನೂರಾರು ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳು ಕಾರ್ಮಿಕರ ಹಕ್ಕುಗಳಿಗೆ ಹಾನಿಕಾರಕವಾಗಿದ್ದು, ಕೆಲಸದ ಭದ್ರತೆ, ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸುತ್ತವೆ ಎಂದು ಆಕ್ಷೇಪಿಸಿದರು. ಈ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು.
ಎಐಸಿಸಿಟಿಯು ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ  ಕಾರ್ಮಿಕ ಮುಖಂಡರಾದ ಅನ್ಸಾರ್ ಬಜಾಲ್, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶಾಹುಲ್ ಹಮೀದ್ ಮಾತನಾಡಿದರು.

By suddi9

Leave a Reply

Your email address will not be published. Required fields are marked *