ಬಂಟ್ವಾಳ: ಜೀವನದಲ್ಲಿ ಕಷ್ಟ ಮತ್ತು ಸುಖ ಸಮಚಿತ್ತದಿಂದ ಸ್ವೀಕರಿಸುವುದರ ಜೊತೆಗೆ ಆಧ್ಯಾತ್ಮಿಕ ಚಿಂತನೆಯೊಂದಿಗೆ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ ಎಂದು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಹೇಳಿದರು

ಬಿ.ಸಿ.ರೋಡಿನ ಚಣಡಿಕಾನಗರದಲ್ಲಿರುವ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ನಿರ್ಮಾಣಗೊಂಡ ನೂತನ ಅನ್ನಛತ್ರ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ನದಾನದಂತಹ ಶ್ರೇಷ್ಟ ದಾನ ಪುಣ್ಯದಾಯಕ ಎಂದರು.
ಕರ್ನಾಟಕ ಪ್ರಾಂತ ಅದಾನಿ ಸಂಸ್ಥೆ ಅಧ್ಯಕ್ಷ ಕಿಶೋರ್ ಆಳ್ವ, ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಳದ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಶುಭ ಹಾರೈಸಿದರು.
ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಕೇಶ ಮಲ್ಲಿ ಮತ್ತಿತರರು ಇದ್ದರು. ದೇವಳದ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಸ್ವಾಗತಿಸಿ, ಮಣಿಮಾಲ ವಂದಿಸಿದರು. ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಆಡಳಿತ ಸಮಿತಿ ಸದಸ್ಯರು, ಕ್ಷೇತ್ರದ ಭಕ್ತರು ಭಾಗವಹಿಸಿದ್ದರು.
