ಬಂಟ್ವಾಳ: ಶ್ರೀ ಕ್ಷೇತ್ರ ಅರ್ಕುಳಕ್ಜೆ ನೂತನ ಅಶ್ವ ರಥದ ಸಮರ್ಪಣೆಯು ಪ್ರಯುಕ್ತ ರಥದ ಮೆರವಣಿಗೆಯು ನಡೆಯಿತು. ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಅರ್ಕುಳ ಬೀಡು ಧರ್ಮದರ್ಶಿ ವಜ್ರನಾಭ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು.

ಫರಂಗಿಪೇಟೆಯ ಸೇವಾಂಜಲಿ ಸಭಾಭವನದ ಬಳಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ದಾರಿ ಮಧ್ಯೆ ಭಕ್ತರು ಹೂಮಾಲೆ, ಆರತಿ ಹಾಗೂ ಘೋಷಣೆ ಕೂಗಿ ಸ್ವಾಗತಿಸಿದರು. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿನ ಕೃಷ್ಣ ಕುಮಾರ್ ಪೂಂಜಾ, ಕಂಪ ಸದಾನಂದ ಆಳ್ವ, ಬಾಸ್ಕರ ಚೌಟ, ತಾರಾನಾಥ ಕೊಟ್ಟಾರಿ, ಅರ್ಕುಳ ಬೀಡು ರತ್ನರಾಜ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.ಮೆರವಣಿಗೆಯಲ್ಲಿ ವಿವಿಧ ಭಜನಾ ತಂಡಗಳು, ಕುಣಿತ ಮೆರವಣಿಗೆಗೆ ವಿಶೇಷ ಮೆರಗು ನೀಡಿತು
