ಬಂಟ್ವಾಳ :ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ.ಕಿ.ಪ್ರಾ. ಶಾಲೆಗೆ
ಎಂ. ಆರ್.ಪಿ.ಎಲ್ ಸಂಸ್ಥೆಯ ಸಿ ಎಸ್ ಆರ್ ನಿಧಿಯಿಂದ 27.50 ಲ.ರೂ.ವೆಚ್ಚದಲ್ಲಿ ನೂತನ 2 ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ನೇರಳಕಟ್ಟೆ ವ್ಯವಸಾಯಿಕ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಶಿಲಾನ್ಯಾಸ ನೆರವೇರಿಸಿದರು .ಈ ಸಂದರ್ಭದಲ್ಲಿ .ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಲ್ಲಿಕಾ ಗಣೇಶ್, ಉಪಾಧ್ಯಕ್ಷ ಹರೀಶ್ ಕುಲಾಲ್, ಗುತ್ತಿಗೆದಾರದ ಅಖಿಲ್ ಶೆಟ್ಟಿ,ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು,ಸದಸ್ಯರು, ಎಸ್. ಡಿ. ಎಂ. ಸಿ ಸದಸ್ಯರು,ಮಕ್ಕಳ ಪೋಷಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು.
