ಬಂಟ್ವಾಳ : ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ಧಕಟ್ಟೆಯಲ್ಲಿರುವ ಕೋರ್ಯಾರು ಶ್ರೀ ದುರ್ಗಾ ಮಹಾಮ್ಮಾಯೀ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಎ. ೨೭ ರಿಂದ ಮೇ ೧ ರವರೆಗೆ ಕ್ಷೇತ್ರದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು.

ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ ಚೌಟ, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸಿದ್ದಕಟ್ಟೆರೋಟರಿ ಫಲ್ಗುಣಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ಕುಕ್ಕಿಪಾಡಿ ಗ್ರಾ.ಪಂ.ನಿಕಟಪೂರ್ವ ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸುದರ್ಶನ ಶೆಟ್ಟಿ ಹಕ್ಕೇರಿ ಮತ್ತಿತರರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕ್ಷೇತ್ರದ ಆಡಳಿತ ಗುರಿಕಾರ ಗೋಪಾಲಗೌಡ, ರಾಯಭಾರಿ ಓಬಯ್ಯ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಪದಾಽಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
