ಮುಂಬಯಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-2029ನೇ ಸಾಲಿನ ಕಾರ್ಯಾಧ್ಯಕ್ಷ ಆಗಿ ಸಿಎ| ಶಾಂತಾರಾಮ ಶೆಟ್ಟಿ ಪುನಾರಾಯ್ಕೆಯಾಗಿದ್ದಾರೆ.

ಉಪ ಕಾರ್ಯಾಧ್ಯಕ್ಷ ಆಗಿ ಡಾ| ಬಿ.ಸಚ್ಚಿದಾನಂದ ರೈ, ಕೋಶಾಧಿಕಾರಿ ಆಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದು, ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.

ನೂತನವಾಗಿ ಚುನಾಯಿತರಾದ ಸಿಎ| ಶಾಂತಾರಾಮ ಶೆಟ್ಟಿ, ಡಾ| ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ| ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ| ಸುಮನ.ಬಿ., ಪಿ.ಬಿ.ಹರೀಶ್ ರೈ, ಸಿಎ| ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.

By suddi9

Leave a Reply

Your email address will not be published. Required fields are marked *