ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ  ಬಂಟ್ವಾಳ ತಾಲೂಕು ತುಂಬೆ ವಲಯದ ಪರಂಗಿಪೇಟೆ ಕಡೆಗೋಳಿ ಮಹಿಳಾ  ಹಾಲು ಉತ್ಪಾದಕರ  ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ 2, ಲಕ್ಷ  ರೂ.ವಿನ ಮಂಜೂರಾತಿ ಪತ್ರವನ್ನು ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.ರವರು ಸಂಘದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಂಜೂರಾತಿ ತ್ರವನ್ನು ಹಸ್ತಾಂತರಿಸಿದರು.

  ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಭಾಸ್ಕರ ಚೌಟ, ತಾರಾನಾಥ ಕೊಟ್ಟಾರಿ, ಪದ್ಮನಾಭ ಗೋವಿನ ತೋಟ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ, ಪರಂಗಿಪೇಟೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅಮಿತ, ಹಾಗೂ  ಹಾಲು ಉತ್ಪಾದಕ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *