ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ  ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ  ನೂತನ ಸಭಾ ಭವನ ರಚನೆಗೆ 75 ಸಾ.ರೂ. ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಶಾಲಾಭಿವೃದ್ಧಿ ಸಮಿತಿಗೆ  ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ  ಮಂಜೂರಾತಿ ಪತ್ರ  ಹಸ್ತಾಂತರಿಸಿ ಮಾತನಾಡಿ   ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾತಿನಿಧ್ಯ  ನೀಡುವ ಸಲುವಾಗಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಡಾ. ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಹಲವಾರು ಯೋಜನೆಗಳಿದ್ದು , ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ  ಸಹಕಾರಿಯಾಗಿದೆ ಎಂದರು.

  ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ವೀರಪ್ಪ ಮೂಲ್ಯ ಬೆತಸರವ್ ,ಚಿನ್ನಾ ಮೈರಾ, ಕಲ್ಲಡ್ಕ ವಲಯದ ಮೇಲ್ವಿಚಾರಕ ಸುಖರಾಜ್, ವೀರಕಂಭ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವಿಜಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ  ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ನಿಯೋಜಿತ ಅಧ್ಯಕ್ಷ ಗಣೇಶ್, ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷ
ಶೇಖರ ಕಾಣೆಕೋಡಿ, ವೀರಕಂಬ ಒಕ್ಕೂಟ ಅಧ್ಯಕ್ಷೆ ಶಾಂಭವಿ ಆಚಾರ್ಯ, ಪದಾಧಿಕಾರಿಗಳಾದ ಆನಂದ ಮಜಿ, ಪ್ರೇಮ ಆಚಾರ್ಯ, ಮಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಶಾಲಾ ಹಿರಿಯ ಶಿಕ್ಷಕಿ ಸಂಗೀತ ಶರ್ಮ  ಪಿ ಜಿ, ಗೌರವ ಶಿಕ್ಷಕಿರಾದ ಹರಿಣಾಕ್ಷಿ, ಪಲ್ಲವಿ, ಮಕ್ಕಳ ಪೋಷಕರಾದ ರಶ್ಮಿತಾ  ಮೊದಲಾದವರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *