ಬಂಟ್ವಾಳ : ಮಾಣಿ ಪ್ರಾಥಮಿಕ ಅರೋಗ್ಯ ಕೇಂದ್ರ, ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ವಿವಿಧ ದಾನಿಗಳ ಸಹಕಾರದಿಂದ ಆಸ್ಪತ್ರೆಯ ಆವರಣಕ್ಕೆ ಅಲವಡಿಸಿದ ಇಂಟರ್ ಲಾಕ್ ಉದ್ಘಾಟನೆ ಹಾಗೂ ಅರೋಗ್ಯಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸದವರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಶ್ರೀ ಉಳ್ಳಾಲ್ತಿ ದೇವಸ್ಥಾನ ಅನಂತಾಡಿ ಅಧ್ಯಕ್ಷರಾದ ನರೇಂದ್ರ ರೈ ನೆಲ್ತೋಟು ಕಾರ್ಯಕ್ರಮ ಉದ್ಘಾಟಿಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಶಶಿಕಲಾ ಆರೋಗ್ಯ ಕೇಂದ್ರದ ಅಭಿವೃದ್ಧಿಯಲ್ಲಿ ಸಹಕರಿಸಿದವರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಕೆ. ಟಿ.ನಾಯ್ಕ, ಮಾಧವ ಕುಲಾಲ್ ಹಾಗೂ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರನ್ನು ಗೌರವಿಸಿ ಅಭಿನಂದಿಸಲಾಯಿತು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಅಧ್ಯಕ್ಷ ಮೋನಪ್ಪ ಪೂಜಾರಿ ಮೊಗರ್ನಾಡ್,ಪ್ರಗತಿಪರ ಕೃಷಿಕರಾದ ಪ್ರಪುಲ್ಲ ರೈ ಮಾಣಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ್ ರೈ, ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕೆ, ಉಪಸ್ಥಿತರಿದ್ದರು.
ಡಾ. ಮನೋಹರ್ ರೈ, ಡಾ ಶ್ರೀನಾಥ್ ಆಳ್ವ , ಡಾ. ಬಿ ಎಸ್ ನಾಯಕ್, ಅನಂತಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸನತ್ ರೈ ಅನಂತಾಡಿ,ಪೆರಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲ ಪರಾಜೆ, ಪೆರ್ನೆ ಪಂಚಾಯತ್ ಕಾರ್ಯದರ್ಶಿ ರಾಜೇಶ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಸುದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಅರುಂಧತಿ ವಂದಿಸಿದರು. ಬಾಲಕೃಷ್ಣ ಅಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು
