ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಕ್ಷೇತ್ರದ ಕಲ್ಲುರ್ಟಿ ಮತ್ತು ಪರಿವಾರ ದೈವಗಳಿಗೆ ಮೇ. ೧೪ರಂದು ಮಠದ ಶ್ರೀ ರುದ್ರಮುನಿ ಮಹಾಸ್ವಾಮಿಯವರ ಮುಂದಾಳತ್ವದಲ್ಲಿ ಅಗೆಲು ಸೇವೆ ನಡೆಯಿತು.

ಶ್ರೀ ಜಂಗಮ ಸಂಸ್ಥಾನ ಮಠದ ಗುರುಪುರ ಇದರ ಶ್ರೀ ನೀಲಕಂಠೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಚಿನ್ ಅಡಪ ಬಡಕರೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತರು ಇದ್ದರು.
