ಬಂಟ್ವಾಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು   ಗುರುವಾರ ಬಂಟ್ವಾಳ ತಾಲೂಕಿನ ಕಾರಣಿಕ ಕ್ಷೇತ್ರದಲ್ಲೊಂದಾದ ಪಣೋಲಿಬೈಲು ಶ್ರೀಕ್ಲುರ್ಟಿ-ಕಲ್ಕುಡ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬಳಿಕ ಪಣೋಲಿಬೈಲು ಕ್ಷೇತ್ರದ ಭಂಡಾರದ ಮನೆಯಲ್ಲಿ ಕುಲಾಲ ಸಮಾಜ ಬಾಂಧವರ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವೇಲು ಅವರು, ಕುಲಾಲ ಸಮುದಾಯದ ಸಂಘಟನೆ ಮತ್ತು ಸಾಮಾಜಿಕ ಚಟುವಟಿಕೆಗಳು ಮತ್ತಷ್ಟು ಬಲಿಷ್ಠವಾಗಬೇಕಿದ್ದು, ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವವೇದಿಕೆ ಸ್ಥಾಪಕಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕಿಲಾಲ್ ಪಂಜಿಕಲ್ಲು, ಕುಲಾಲ ಕುಂಬಾರ ಯುವವೇದಿಕೆಯ ಜಿಲ್ಲಾಧ್ಯಕ್ಷ ಲ. ಅನಿಲ್ ದಾಸ್, ಮಾಣಿಲ ಕ್ಷೇತ್ರ ಟ್ರಸ್ಟಿ ಚಂದ್ರಶೇಖರ, ದ.ಕ. ಜಿಲ್ಲಾ ಕೋಳಿ ವಿವಿದೊದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಅಡ್ಯಾರ್, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಭಂಡಾರದ ಮನೆಯ ನವೀನ್ ಕುಲಾಲ್, ರಮೇಶ್ ಕುಲಾಲ್, ಶಿವಾನಂದ ಕುಲಾಲ್,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ,  ಜಯಂತ್ ಸಂಕೋಲಿಗೆ, ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಮಾಜಿ ಅಧ್ಯಕ್ಷ ಮಚ್ಚೇಂದ್ರ ಸಾಲ್ಯಾನ್, ಹಿರಿಯ ನಾಗರಿಕ ಸಂಘದ ಮಾಜಿ ಅಧ್ಯಕ್ಷ ಸೇಸಪ್ಪ ಮಾಸ್ತರ್, ಕುಲಾಲ ಯುವವೇದಿಕೆ ಮಾಜಿ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಬಂಟ್ವಾಳ ಕುಲಾಲ ಯುವವೇದಿಕೆ ಅಧ್ಯಕ್ಷ ಸುಮಿತ್ ಸೊರ್ನಾಡ್, ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಭಾರತಿ ಸೇಸಪ್ಪ ಸಹಿತ ಕುಲಾಲ ಸಮಾಜದ ಮುಖಂಡರು,ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *