ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಅಶ್ರಯದಲ್ಲಿ ನಡೆಯುವ 44ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆಯು ಜೂ 07ರಂದು ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು,ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಉಪನ್ಯಾಸಕಿ ಕೆ ಕವಿತಾ ದೇವದಾಸ ಅರ್ಕುಳ ಇವರು ಸರ್ವಾನುಮತದಿಂದ ಆಯ್ಕೆಯಾದರು.


ಇತಿಹಾಸದಲ್ಲಿ ಪ್ರಥಮ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆ.

ಸಾರ್ವಜನಿಕ ಶ್ರೀ ಗಣೇಶೋತ್ಸವದ 43 ವರುಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಫರಂಗಿಪೇಟೆ ಹಾಗೂ ಬಹುಶ ಇಡೀ ದ.ಕ ಜಿಲ್ಲೆಯಲ್ಲೇ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವುದು ಇವರ ಹೆಗ್ಗಳಿಕೆ.

ಕೆ ಕವಿತಾ ದೇವದಾಸ ಅರ್ಕುಳ ಇವರು ಕಳೆದ 33ವರ್ಷಗಳಿಂದ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ವಾಣಿಜ್ಯ ಉಪನ್ಯಾಸಕರ ಸಂಘದ ಕೋಶಾಧಿಕಾರಿಯಾಗಿ, ಫರಂಗಿಪೇಟೆ ಅಂಜನಾದೇವಿ ಮಾತೃ ಮಂಡಲಿಯ ಸ್ಥಾಪಕ ಅಧ್ಯಕ್ಷರಾಗಿ, ಸೇವಾಂಜಲಿ ಪ್ರತಿಷ್ಠಾನದ ಸಕ್ರಿಯ ಸದಸ್ಯರಾಗಿ,ಕಾರ್ಯಕ್ರಮ ನಿರೂಪಕರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ.

By suddi9

Leave a Reply

Your email address will not be published. Required fields are marked *