ಕೈಕಂಬ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸೂರಿಂಜೆ -ಪುಚ್ಚಾಡಿ ರಸ್ತೆಯ ಅಭಿವೃದ್ಧಿ ಸಂಪೂರ್ಣ ಹದಗೆಟ್ಟಿದ್ದು, ಕಾಮಗಾರಿಗಳು ಕಳೆದ ಹದಿನೈದು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದೆ ಎಂದು ದೂರಿದ್ದಾರೆ.

 ಪಕ್ಷದ ಕಾರ್ಯಕರ್ತರಾಗಿ ನಾವು ಪಕ್ಷದ ಮುಖಂಡರಲ್ಲಿ ಹಲವು ಬಾರಿ ಹೇಳಿದರು ಕ್ಯಾರೇ ಮಾಡಿಲ್ಲ ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಇದುವರೆಗೆ ರಸ್ತೆ ದುರಸ್ತಿ, ಡಾಮರೀಕರಣ ಅಥವಾ ಕಾಂಕ್ರೀಟೀಕರಣ ಕಾರ್ಯಗಳು ನಡೆದಿಲ್ಲ.

ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ತೀವ್ರ ಸಂಕಷ್ಟ ಅನುಭವಿಸುತ್ತಿದ್ದು ಇದನ್ನು ಖಂಡಿಸಿದ 159ನೇ ಪುಚ್ಚಾಡಿ ಸೂರಿಂಜೆ ಬೂತ್‌ನ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ , ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ನೀಡಿ ಎಚ್ಚರಿಸಿದ್ದಾರೆ

By suddi9

Leave a Reply

Your email address will not be published. Required fields are marked *