ಬಂಟ್ವಾಳ:ಕೆಲಿಂಜ ದ. ಕ. ಜಿ. ಪಂ. ಸ. ಹಿ ಪ್ರಾ. ಶಾಲೆ, ಕೆಲಿಂಜ ಇಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು.
ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
ಈ ಸಂದರ್ಭ ಎಸ್.ಡಿ ಎಂ.ಸಿ ಅಧ್ಯಕ್ಷ ಮೋಹಿತ್ ಕುಮಾರ್ ಎಮ್, ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಹಾಗೂ ಸಹ ಶಿಕ್ಷಕರು ಹಾಗೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹಿತ್ ಕುಮಾರ್ ಎಮ್ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಣೆ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಕಾರ್ಯಕ್ರಮ ನಿರ್ವಹಿಸಿದರು.
