ಬಂಟ್ವಾಳ:ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಆಶ್ರಯದಲ್ಲಿ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಸಹಯೋಗದೊಂದಿಗೆ “ಯಕ್ಷ ಧ್ರುವ ಯಕ್ಷ ಶಿಕ್ಷಣ ತರಬೇತಿಗೆ ಚಾಲನೆ ನೀಡಲಾಯಿತು.  ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ  ಪೂವಪ್ಪ ಶೆಟ್ಟಿ ಅಳಿಕೆ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿ ” *ಯಕ್ಷಧ್ರುವ ಪಟ್ಲ ಫೌಂಡೇಶನ್ ತನ್ನ ಸಮಾಜಮುಖಿ ಸೇವಾ ಕಾರ್ಯದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು , ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯ ಜತೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ.

ವಿದ್ಯಾರ್ಥಿಗಳು ಈ ಯಕ್ಷ ಶಿಕ್ಷಣವನ್ನು ಪಡೆದುಕೊಂಡು, ಉತ್ತಮ ಕಲಾವಿದರಾಗುವುದರ ಜತೆಗೆ ಆದರ್ಶ ವ್ಯಕ್ತಿಗಳಾಗಿ ಮೂಡಿಬರಬೇಕು ಎಂದರು. ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ  ಭವಾನಿ ರೈ ಕೊಲ್ಯ ಅಧ್ಯಕ್ಷತೆ ವಹಿಸಿದ್ದರು. ಯಕ್ಷಪೋಷಕರಾದ ಕೃಷ್ಣಪ್ರಸಾದ್ ವಿಟ್ಲ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಗೌರವ ಸಲಹೆಗಾರರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ,ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಮೂರ್ಜೆಬೆಟ್ಟು,ವಿಟ್ಲ ಯಕ್ಷ ಭಾರತ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಸಂಜೀವ ಪೂಜಾರಿ, ಚಂದಳಿಕೆ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ದೇಜಪ್ಪ ಪೂಜಾರಿ, ಯಕ್ಷ ಗುರು ಓಂಪ್ರಕಾಶ್ ಕಲ್ಲಡ್ಕ, ಜಗಜೀವನ್ ರಾಮ್ ಶೆಟ್ಟಿ, ,ಸುರೇಶ್ ಶೆಟ್ಟಿ, ವೇಣುಗೋಪಾಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ವಿಶ್ವನಾಥ ಕುಳಾಲು ಸ್ವಾಗತಿಸಿ, ಶಿಕ್ಷಕಿ ರೇಷ್ಮಾ ವಂದಿಸಿದರು. ಶಿಕ್ಷಕ ವೆಂಕಟೇಶ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *