ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ,ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.
ಬಿ.ಮುಇಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಲಾ ಶಿಕ್ಷಕರಾದ ಸುಭ್ರಮಣ್ಯ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಮೌಲ್ಯಯುತ ಚಟುವಟಿಕೆಗಳು ಅವಶ್ಯಕ,ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಶಾಲಾಮಟ್ಟದಲ್ಲೇ ರೂಢಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಆಯ್ಕೆಯಾದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚೈತ್ರಾ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ, ಶಾಲಾ ನಾಯಕ ಭವಿಷ್ ಎಲ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಾದ ಮುನಾವರ್ ಮಾಝ್ ಸ್ವಾಗತಿಸಿದರು, ಕುಮಾರಿ ರಿಧಾ ನಫೀಸಾ ಹಲಿಯಾರ್ ವಂದಿಸಿ , ಕುಮಾರಿ ಜೆನಿಶಾ ಲೊಬೋ ಕಾರ್ಯಕ್ರಮವನ್ನು ನಿರೂಪಿಸಿದರು.
