ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್. ಬಂಟ್ವಾಳ ತಾಲೂಕು ಸರಪಾಡಿ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಟ್ಟಿಕಲ ಇದರ ಸಂಯುಕ್ತಾಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮವು ಶಾಲಾ ವಠಾರದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುರುಷೋತ್ತಮ್ ಅವರು ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ಭಾಸ್ಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುಶಾಲಾ ಮುಖ್ಯೋಪಾಧ್ಯಾಯರಾದಮಲ್ಲೇಶಪ್ಪ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈ ಕಾರ್ಯಕ್ರಮವು ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ ಎಂದರು.
ಶಾಲಾ ಮಕ್ಕಳಿಗೆ ಪರಿಸರದ ಕುರಿತಾಗಿ ಚಿತ್ರಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪರಿಸರ ಗೀತೆ ಸ್ಪರ್ಧೆ ನಡೆಸಲಾಯಿತ.
ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ದಮಯಂತಿ, ಒಕ್ಕೂಟದ ಪದಾಧಿಕಾರಿ ಪೂರ್ಣಿಮಾ , ಸೇವಾ ಪ್ರತಿನಿಧಿ ಗುಣವತಿ, ಶಾಲಾ ಶಹ ಶಿಕ್ಷಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ವಿದ್ಯಾ ಸ್ವಾಗತಿಸಿದರು.
ತೇಜಾ ಮತ್ತು ಸಂಗಡಿಗರು ಪರಿಸರ ಗೀತೆ ಹಾಡಿದರು ಶಿಕ್ಚಕಿ ಪವಿತ್ರಾ ಕಾರ್ಯಕ್ರಮ ನಿರ್ವಹಿಸಿದರು.
