ಬಂಟ್ವಾಳ: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ರಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 7 ನೇ ರ್ಯಾಂಕ್ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ, ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಉಮೇಶ್ ಪೂಜಾರಿ ಹಾಗೂ ಪುಷ್ಪಾವತಿ ದಂಪತಿ ಪುತ್ರ ಪ್ರಿತೇಶ್ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದಿಸಲಾಯಿತು.

ವಿದ್ಯಾರ್ಥಿಯನ್ನು ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಗೊಳಪಟ್ಟ ವಿದ್ಯಾರ್ಥಿ ಪ್ರಿತೇಶ್ ತನ್ನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಬ್ಯಾಸವನ್ನು ಸರಕಾರಿ ಶಾಲೆಯಲ್ಲಿ ಪೂರೈಸಿ ಬಳಿಕ ಕಲ್ಲಡ್ಕ ಶ್ರೀರಾಮಾ ಕಾಲೇಜಿನಲ್ಲಿ ವಿದ್ಯಾರ್ಜನೆಗೈದು ರಾಜ್ಯಮಟ್ಟದಲ್ಲಿ 7 ನೇ ಸ್ಥಾನ ಪಡೆದಿರುವುದು ಸಂಘಕ್ಕೆ ಹೆಮ್ಮೆಯ ವಿಚಾರವಾಗಿದೆ,ಸರಕಾರಿ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಲು ಸಾಧ್ಯವಿದೆ ಎಂಬುದನ್ನು ಇತರ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ಮಾದರಿಯಾಗಿದ್ದಾರೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರಿತೇಶ್ ಸಂಘದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರುಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ,ರಶ್ಮಿತ್ ಶೆಟ್ಟಿ , ದಿನೇಶ್ ಪೂಜಾರಿ ಹುಲಿಮೆರು,ಚಂದ್ರಶೇಖರ ಶೆಟ್ಟಿ ಅರಳ,ವಿಶ್ವನಾಥ್ ಶೆಟ್ಟಿಗಾರ್ ಸಂಗಬೆಟ್ಟು,ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರತಿನಿಧಿಕೀರ್ತಿರಾಜ್,ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪ್ರಮುಖರಾದ ಮೋಹನ್ ಕೊಯಿಲ ಉಪಸ್ಥಿತರಿದ್ದರು.ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
