ಮುಂಬಯಿ : ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂ. ೨೦ ರಂದು ಮುಂಬಯಿ ಪ್ರಭಾದೇವಿಯಲ್ಲಿರುವ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಅಧಿಕೃತ ಮುಂಬೈ ಪ್ರವಾಸದ ಅಂಗವಾಗಿ ದೇವಸ್ಥಾನಕ್ಕೆ ಆಗಮಿಸಿದ ಅವರು ರಾಜ್ಯದ ಸುಭಿಕ್ಷತೆ, ಜನರ ಒಳಿತಿಗಾಗಿ ಹಾಗೂ ದೇಶದ ಶಾಂತಿ-ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಮುಖ್ಯಮಂತ್ರಿಗಳ ದೇವಸ್ಥಾನ ಭೇಟಿಯ ಸಂದರ್ಭದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್ಜಿಒ) ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಹಾಗೂ ಚಿಣ್ಣರ ಬಿಂಬದ ಅಧ್ಯಕ್ಷರಾದ ಪ್ರಕಾಶ್ ಭಂಡಾರಿ ಅವರು ಉಪಸ್ಥಿತರಿದ್ದರು

ಮುಂಬೈನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಭಕ್ತರು ಆಗಮಿಸಿ ಶ್ರೀ ಗಣೇಶನ ದರ್ಶನ ಪಡೆಯುವುದು ವಿಶೇಷವಾಗಿದೆ.
