ಬಂಟ್ವಾಳ: ವಾಮದಪದವಿನಲ್ಲಿ ನಡೆದ 2076 ನೇ ಮದ್ಯವರ್ಜನ ಶಿಬಿರದಲ್ಲಿ 63 ಮಂದಿ ಶಿಬಿರಾರ್ಥಿಗಳಿಗೆ ಜೀವನದಲ್ಲಿ ಒಂದು ಹೊಸ ತಿರುವು ಸಿಕ್ಕಿದ್ದು,ಅವರ ಮುಂದಿನ ಬದುಕಿನಲ್ಲು ಪರಿವರ್ತನೆಗೂ ಅವಕಾಶವಾಗಲಿದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು.

ಬಂಟ್ವಾಳ ತಾಲೂಕಿನ ವಾಮದಪದವಿನ ಬಸ್ತಿಕೋಡಿ ಶ್ರೀ ಪದ್ಮಾವತಿ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ 8 ದಿನಗಳ ಕಾಲ ನಡೆದ 2076ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕುಜನಜಾಗೃತಿ ವೇದಿಕೆಯ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಅಮ್ಟಾಡಿ ಅವರು ಮಾತನಾಡಿ, ಸಮಾಜದಲ್ಲಿ ಯಾರೂ ಕೆಟ್ಟವರಿಲ್ಲ. ಕೆಲವೊಂದು ಸಂದರ್ಭಗಳು ವ್ಯಸನಿಗಳನ್ನಾಗಿ ಮಾಡುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಧರ್ಮಾಧಿಕಾರಿಗಳಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು ಎಂದು ತಿಳಿಸಿದರು.
ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಹರೀಂದ್ರ ಪೈ,
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಾದ ಅಮ್ಮು ರೈ ಅರ್ಕಾಡಿ, ಸದಾನಂದ ನಾವೂರು, ಅರ್ಕಕೀರ್ತಿ ಇಂದ್ರ, ಗಣೇಶ್ ಪ್ರಭು ಪ್ರಕಾಶ್ ಗಟ್ಟಿ, ಯತೀಶ್, ಸದಾನಂದ ಶೀತಲ್, ಪ್ರವೀಣ್ ಕಾಡಬೆಟ್ಟು, ಶೇಖರ್ ಸಾಮಾನಿ, ಶೌರ್ಯ ತಂಡದ ಕ್ಯಾಪ್ಟನ್ ಪ್ರಕಾಶ್, ಪರಮೇಶ್ವರ, ಶಶಿಧರ ಆಚಾರ್ಯ, ಭಾರತಿ ಚೌಟ, ಡಾ. ರಾಮಕೃಷ್ಣ ಇರ್ವತ್ತೂರು, ಶಿಬಿರಾಧಿಕಾರಿ ರಮೇಶ್ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಜನಜಾಗೃತಿ ಮೇಲ್ವಿಚಾರಕ ನಿತೇಶ್ ಸಹಕರಿಸಿದರು.ಮಹೇಶ್, ಶ್ರವಣ್ ಅನಿಸಿಕೆ ವ್ಯಕ್ತ ಪಡಿಸಿದರು.
