ಬಂಟ್ವಾಳ: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಅಂಗವಾಗಿ ನಡೆಯುತ್ತಿರುವ ಹೊಸ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಸೇರ್ಪಡೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ.)ಸೋಮವಾರ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್.ಐ.ಆರ್. ಅಡಿಯಲ್ಲಿ ನಡೆಯುತ್ತಿರುವ ಹೊಸ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿವರಗಳ ಪರಿಶೀಲನೆ ಹಾಗೂ ಅಗತ್ಯ ದಾಖಲೆಗಳ ಕುರಿತು ಮಾಹಿತಿ ವಿನಿಮಯ ನಡೆಯಿತು. ಮತದಾರರ ಪಟ್ಟಿಯು ಸಮರ್ಪಕ ಹಾಗೂ ನಿಖರವಾಗಿರಲು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನಡೆಯುತ್ತಿರುವ ಪ್ರಕ್ರಿಯೆಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಈ ವೇಳೆ ತಿಳಿಸಲಾಯಿತು.
ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಅವರು ಕರೆ ನೀಡಲಾಯಿತು.
