ಬಂಟ್ವಾಳ : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ 93 ಮಂದಿ ಮರಣ ಹೊಂದಿದವರರ ಪಟ್ಟಿ ಮಾಡಲಾಗಿದ್ದು, 5.22 ಲಕ್ಷ ರೂ. ವಸೂಲಾತಿ ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳುಮಾಹಿತಿ ನೀಡಿದ್ದಾರೆ.

ತಾಲೂಕು ಪಂಚಾಯತ್ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆದ
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪಡಿತರ ಚೀಟಿ ಸಮಸ್ಯೆಯಿಂದ ಅರ್ಹ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದು,ಈ ಸಮಸ್ಯೆಯನ್ನು  ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದರು.
ಆಗಸ್ಟ್  ಅಂತ್ಯದವರೆಗೆ ಗೃಹ ಜ್ಯೋತಿ ಯೋಜನೆಗೆ ಹೊಸ ನೋಂದಣಿಯನ್ನು ಮಾಡಿಕೊಳ್ಳ ಲಾಗುವುದಿಲ್ಲ. ಈಗಾಗಲೇ ಮೆಸ್ಕಾಂ ವತಿಯಿಂದ ಸಮೀಕ್ಷೆಯನ್ನು  ಕನಡೆಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಮೆಸ್ಕಾಂ ಅಧಿಕಾರಿ ತಿಳಿಸಿದರು.
ಬಸ್ ಪಾಸ್ ವಿತರಣೆ:
ಗಡಿನಾಡ ವಿದ್ಯಾರ್ಥಿನಿಯರಿಗೂ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಮಂಗಳೂರು  ಹಾಗೂ ಬಂಟ್ವಾಳ ಭಾಗದಲ್ಲಿ ನೆಲೆಸಿರುವ ಗಡಿನಾಡ ವಿದ್ಯಾರ್ಥಿನಿಯರಿಗೆ ಬಂಟ್ವಾಳ ಘಟಕದಲ್ಲಿ ಬಸ್ ಪಾಸ್ ವಿತರಿಸಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿಯ ಬಿ.ಸಿ ರೋಡ್ ಘಟಕದ ವ್ಯವಸ್ಥಾಪಕರು ತಿಳಿಸಿದರು.
ಕಳೆದ ಸಭೆಯಲ್ಲಿ ಸೂಚಿಸಿದಂತೆ ಕೆ.ಸಿ. ರೋಡ್ ನಲ್ಲಿ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಂಭೂರು ಭಾಗಕ್ಕೆ ಹಾಗೂ ಮೂಡಬಿದಿರೆ- ಬಿ.ಸಿ.ರೋಡ್ ಮಾರ್ಗದಲ್ಲಿ ಕೆಎಸ್ಆರ್ ಟಿಸಿ ಬಸ್ ಸಂಚಾರದ ವ್ಯವಸ್ಥೆಕೈಗೊಳ್ಳುವಂತೆ ಮತ್ತು ಬಂಟ್ವಾಳದ ಮಣಿಹಳ್ಳದಲ್ಲಿ  ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರು ಆಗ್ರಹಿಸಿದರು.
ಪಂಚ ಗ್ಯಾರೆಂಟಿ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ನಾರಾಯಣ ನಾಯ್ಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಸಚಿನ್ ಕುಮಾರ್, ಸಮಿತಿ ಸದಸ್ಯರು ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಬ್ಯಾನರ್ ಅನಾವರಣ:
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಬ್ಯಾನರ್ ಅನಾವರಣಗೊಳಿಸಲಾಯಿತು. 

By Suddi9

Leave a Reply

Your email address will not be published. Required fields are marked *