ಬಂಟ್ವಾಳ: ಪಿಂಚಣಿ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ಗಳಿಗೆ ಅನುಮತಿಸಲಾದ ಆದಾಯ ಮಿತಿಯನ್ನು ವಿಗದಿಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಂತೆ ಸರಕಾರಕ್ಕೆ ಪತ್ರ ಬರೆಯಲು ಬುಧವಾರ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್‌ನ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಇರ್ವತ್ತೂರು ಗ್ರಾ.ಪಂ.ನ ಅಟಲ್ ಜೀ ಸಭಾಭವನದಲ್ಲಿ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ನಡೆದಿದ್ದು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾದ ಬಂಟ್ವಾಳ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಭಟ್ ಅವರ ಅಧ್ಯಕ್ಷತೆ ವಹಿಸಿದ್ದರು

ಇರ್ವತ್ತೂರು ಗ್ರಾಮದ ಮಠದ ಬಳಿ ಸ್ಮಶಾನಕ್ಕೆ ಕಾದಿರಿಸಿದ ಜಮೀನನ್ನು ಗಡಿ ಗುರುತು ಮಾಡಿಸಿಕೊಳ್ಳಲು ಹಾಗೂ ಅದರಲ್ಲಿರುವ ಒತ್ತುವರಿಯನ್ನು ತೆರವುಗೊಳಿಸಲು ಬಂಟ್ವಾಳ ತಹಶೀಲ್ದಾರರು ಅವರಿಗೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಆರೋಗ್ಯ ಉಪಕೇಂದ್ರದಲ್ಲಿ ತಮ್ಮ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಲಭ್ಯವಿರುವಂತೆ ಹಾಗೂ ರೋಗಿಗಳ ಮತ್ತು ಗರ್ಭಿಣಿಯರ ಮನೆಗಳಿಗೆ ಬೇಟಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ ಹಿನ್ನಲೆಯಲ್ಲಿ ಮೇಲಾಧಿಕಾರಿಯವರಿಗೆ ಪತ್ರ ಬರೆಯಲು ಸಭೆ ತೀರ್ಮಾನ ಕೈಗೊಂಡೊತು.
ಇರ್ವತ್ತೂರು ಗ್ರಾಮದ ಮಠದ ಬಳಿ ಬೆಟ್ಟು ಮನೆ ಎಂಬಲ್ಲಿ ಹೊಸ ಟ್ರಾನ್ಸ್ ಫಾರ್ಮರ್ ಆಳವಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಗೆ ಪತ್ರ ಬರೆದುಕೊಳ್ಳಲು ನಿರ್ಣಯಿಸಲಾಯಿತು.ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಸರಕಾರದಿಂದ ದೊರಕುವ ಸವಲತ್ತಿನ ಕುರಿತು ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ.ಆರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಂಚಾಯತ್ ಸಿಬ್ಬಂದಿ ಸುಜಾತ ವರದಿ ಮಂಡಿಸಿದರು.
