ಬಂಟ್ವಾಳ: ಇಲ್ಲಿನ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಶ ಜಯವಂತ ನಾಯಕ್ ಅವರು ದೀಪ ಬೆಳಗಿಸಿ ವಿವಿಧ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಶಾಲಾ ಸಂಚಾಲಕರಾದ ಸುರೇಶ್ ವಿ ಬಾಳಿಗಾ, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿ’ಸೋಜ , ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ಇವರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
