ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಲಾವಣ್ಯ ಅವರ ಹತ್ಯೆ ಪ್ರಕರಣದಲ್ಲಿ ಶೀಘ್ರ ನ್ಯಾಯ ದೊರಕುವಂತೆ ಹಾಗೂಕಾನೂನಿನಡಿ ಗಲ್ಲು ಶಿಕ್ಷೆ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಉಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.)ನ ಪದಾಧಿಕಾರಿಗಳ ನಿಯೋಗ ಬಂಟ್ವಾಳ ಉಪವಿಭಾಗದ ಎಎಸ್ಪಿಯವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿತು.

ಜುಲೈ 16 ರಂದು ಸಂಜೆ  5.45 ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಮ್ಮ ಗ್ರಾಮದ ಅಮಾಯಕ ಯುವತಿ ಲಾವಣ್ಯ ಕಕ್ಯಪದವು ಅವರ ಹತ್ಯೆ ನಡೆದಿರುವುದು ತೀವ್ರ ದುಃಖ, ಆಘಾತ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ ಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕಾರ್ಯವನ್ನು ಟ್ರಸ್ಟ್  ಸ್ವಾಗತಿಸುತ್ತದೆ. ಆದರೆ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ,  ನ್ಯಾಯಾಲಯಕ್ಕೆ ಬಲವಾದ ದೋಷಾರೋಪಣಾ ಪಟ್ಟಿ ಸಲ್ಲಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಪ್ರಕರಣವನ್ನು ವಿಶೇಷ ಆದ್ಯತೆಯ ನೆಲೆಯಲ್ಲಿ ಪರಿಗಣಿಸಬೇಕು, ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ ಲಾವಣ್ಯಳ ಕುಟುಂಬಕ್ಕೆ  ನ್ಯಾಯ ದೊರಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಳಿಗ್ರಾಮಸ್ಥರ ಪರವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟ್ರಸ್ಟ್ ಅಧ್ಯಕ್ಷರಾದ ಕೇಶವ ಪೂಜಾರಿ ತಿಮರಾಡ್ದ, ವಿಶ್ವನಾಥ ಸಾಲಿಯಾನ್  ಬಿತ್ತ, ವಿಶ್ವನಾಥ ಪೂಜಾರಿ ಕೇರ್ಯ, ಸತೀಶ್ ಪೂಜಾರಿ ಸುಧೆಕ್ಕಾರು, ದಿನೇಶ್ ಪೂಜಾರಿ ಕೇರ್ಯ, ಹರೀನಾಕ್ಷಿ ಕೊರಡಿಂಗೇರಿ, ಗಾಯತ್ರಿ ತಿಮರಡ್ಡ,  ಮಮತಾ ಸುಧೆಕ್ಕಾರು ಮೊದಲಾದವರಿದ್ದರು. 

By Suddi9

Leave a Reply

Your email address will not be published. Required fields are marked *