ಬಂಟ್ವಾಳ: ಬಂಟ್ವಾಳ ತಾಲೂಕು‌ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ 14-17 ರ ವಯೋಮಾನದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟ ದಡ್ಡಲಕಾಡು ಪಿ.ಎಂ.ಶ್ರೀ ಸರಕಾರಿ ಅಂಗ್ಲ  ಮಾಧ್ಯಮ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆಯಿತು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಬಿ.ಎಲ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು.ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಬಾಲಕೃಷ್ಣ ಗೌಡ ಅಧಕ್ಷತೆ ವಹಿಸಿದ್ದರು.

ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್,ಜಿಲ್ಅ ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್,ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಆಶಾ ನಸಯಕ್,ಶಿಕ್ಷಣ ಸಂಯೋಜಕ‌ ರಮಾನಂದ,  ರಾಯಿ‌ಕ್ಲಸ್ಟರ್ ನ ಸಿಆರ್ ಪಿ ಪ್ರೇಮಲತಾ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ
ರಾಮಚಂದ್ರ,ಪಂಜಿಕಲ್ಲು ಪ್ರಾ.ಆ.ಕೇಂದ್ರ ವೈದ್ಯಾಧಿಕಾರಿ ಡಾ.ಜೀವನ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ರೈ,ಗೌರವಾಧ್ಯಕ್ಷ ರಾಜೇಂದ್ರ ರೈ ಅಳಿಕೆ,ಗ್ರೇಡ್ -1ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ,ಉಪಾಧ್ಯಕ್ಷ ನವೀನ್ ಪಿ.ಎಸ್.,ಗ್ರೇಡ್ 2 ಸಂಘದ ಅಧ್ಯಕ್ಷ ಇಂದುಶೇಖರ್ ,ತೀರ್ಪುಗಾರ ಅಶೋಕ್,ಹಿರಿಯ ಶಿಕ್ಷಕಿ ಹಿಲ್ಡಾ  ಫೆರ್ನಾಡೀಸ್ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ  ಶೈಲೇಂದ್ರ ಕುಮಾರ್ ಸ್ವಾಗತಿಸಿದರು. ಪ್ರಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಜಯಶ್ರೀ ವಂದಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ್ ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *