ಬಂಟ್ವಾಳ:ಇಲ್ಲಿನ ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣದಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.

ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ಉಮೇಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಯಕ್ಷ ಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ರವರು ಪ್ರಾಸ್ತವಿಕ ವಾಗಿ ಮಾತನಾಡಿ ಯಕ್ಷ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಯಕ್ಷ ಶಿಕ್ಷಣದ ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕು ಸಂಚಾಲಕಿ ಸಾಯಿ ಸುಮಾ ನಾವಡ, ಯಕ್ಷ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕ ಕಾರಂದೂರು, ಸಿದ್ದಕಟ್ಟೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಕರ್ಪೆ, ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.ಕಾಲೇಜಿನ ಉಪ ಪ್ರಾoಶುಪಾಲೆ ಲೋನಾ ಲೋಬೊ ಸ್ವಾಗತಿಸಿದರು. .
ಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು
